ಶಿವಮೊಗ್ಗ ನಗರದ ವಿದ್ಯಾನಗರ ಸಮೀಪದ ಹಳೇ ರೈಲ್ವೆ ನಿಲ್ದಾಣದ ಸಮೀಪ ಚಲಿಸುವ ರೈಲಿಗೆ ಸಿಲುಕಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ. ಮೃತ ವ್ಯಕ್ತಿಯನ್ನು ಗುರುಪುರ ಬಡಾವಣೆಯ ನಿವಾಸಿ, 68 ವರ್ಷದ ರುದ್ರಪ್ಪ ಎಂದು ಗುರುತಿಸಲಾಗಿದೆ. ಇವರು ಗಾರೆ ಕೆಲಸ ಮಾಡುವ ಮೂಲಕ ಜೀವನ ಸಾಗಿಸುತ್ತಿದ್ದರು. ಸೌದೆ ಆರಿಸಲು ಆಗಮಿಸಿದ್ದ ವೇಳೆ, ಮೈಸೂರು – ತಾಳಗುಪ್ಪ ರೈಲಿಗೆ ಸಿಲುಕಿ ರುದ್ರಪ್ಪ ಅವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಶಿವಮೊಗ್ಗ ರೈಲ್ವೆ ಠಾಣೆ ಪೊಲೀಸರು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರಗಳು ಇನ್ನಷ್ಟೆ ಲಭ್ಯವಾಗಬೇಕಾಗಿದೆ.
ಚಲಿಸುವ ರೈಲಿಗೆ ಸಿಲುಕಿ ವ್ಯಕ್ತಿ ಸಾವು
