ಶಿಕಾರಿಪುರ ಪಟ್ಟಣದ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ಕುಮದ್ವತಿ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜು ಆವರಣದ ಸಭಾಂಗಣದಲ್ಲಿ “ವಿದ್ಯಾರ್ಥಿ ಸಂಘ ಉದ್ಘಾಟನೆ ಹಾಗೂ ದ್ವಿತೀಯ ಪಿಯುಸಿ” ಯಲ್ಲಿ ಹೆಚ್ಚಿನ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಇಂದು ಆಯೋಜಿಸಲಾಗಿದ್ದ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಅಭಿನಂದಿಸಿ, ನೂತನ ವಿದ್ಯಾರ್ಥಿ ಘಟಕ ಉದ್ಘಾಟಿಸಲಾಯಿತು.
ಈ ಸಂದರ್ಭದಲ್ಲಿ ಡಿ.ಡಿ.ಪಿ.ಐ ಶ್ರೀ ಕೃಷ್ಣಪ್ಪ ಅವರು, ಸ್ವಾಮಿ ವಿವೇಕಾನಂದ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಶಿವಕುಮಾರ್ ಅವರು, ಪ್ರಾಂಶುಪಾಲರಾದ ಶ್ರೀ ಶಿವಕುಮಾರ್ ಅವರು ಮತ್ತು ಶ್ರೀ ವೀರೇಂದ್ರ ಅವರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.