ಶಿವಮೊಗ್ಗ: ದಾನಗಳಲ್ಲಿ ಅತ್ಯಂತ ಶ್ರೇಷ್ಠ ಹಾಗೂ ಪವಿತ್ರ ದಾನವು ರಕ್ತದಾನ ಆಗಿದ್ದು, ದಾನಿಗಳಿಂದ ಸಂಗ್ರಹಿಸಿದ ರಕ್ತವು ಇನ್ನೊಬ್ಬರ ಪ್ರಾಣ ಉಳಿಸುವಲ್ಲಿ ಮಹತ್ತರ ಪಾತ್ರ ವಹಿಸುತ್ತದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾಕ್ಟರ್ ಚನ್ನೇಶ್ ಬಿಜಿ ಅಭಿಮತ ವ್ಯಕ್ತಪಡಿಸಿದರು ಅವರು ಇಂದು ಬಾಪೂಜಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ರೆಡ್ ಕ್ರಾಸ್ ಸಂಸ್ಥೆ ಎನ್ಎಸ್ಎಸ್ ಘಟಕ
ರೋವರ್ಸ್ ರೆಂಜರ್ಸ್. ಸಮಾಜಶಾಸ್ತ್ರ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಾದ ಬೃಹತ್ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು
ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ರಕ್ತದ ಗುಂಪು ಪರೀಕ್ಷೆ ಹಾಗೂ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಪ್ರತಿ ವರ್ಷ ವಿಶ್ವಾದ್ಯಂತ ಜುಲೈ 11ರಂದು ವಿಶ್ವ ಜನಸಂಖ್ಯಾ ದಿನಾಚರಣೆ ಆಚರಿಸಲಾಗುತ್ತದೆ. ಆರೋಗ್ಯವಂತ ಯುವಜನತೆ ರಕ್ತದಾನ ಮಾಡಬೇಕು ಎಂದು ತಿಳಿಸಿದರು ಇದೇ ಸಂದರ್ಭದಲ್ಲಿ ಎನ್ಎಸ್ಎಸ್ ನ ಸಂಚಾರಕರಾದ ಡಾಕ್ಟರ್ ರೇಷ್ಮಾ ಅವರು ಮಾತನಾಡುತ್ತಾ
ರಕ್ತದ ಕೊರತೆ ಇರುವುದನ್ನು ನೋಡುತ್ತಿದ್ದು, ಸಕಾಲದಲ್ಲಿ ರಕ್ತ ಸಿಗದೇ ಜೀವ ಕಳೆದುಕೊಳ್ಳುವ ಸ್ಥಿತಿ ಇರುತ್ತದೆ. ಇಂದು ಡೆಂಗ್ಯೂ ಹಾಗೂ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ ಆದರಿಂದ ರಕ್ತದ ಕೊರತೆ ತುಂಬಾ ಇದೆ ಈ ನಿಟ್ಟಿನಲ್ಲಿ ಯುವಜನತೆ ರಕ್ತದಾನ ಮಾಡಲು ಮುಂದಾಗಬೇಕು ಎಂದು ತಿಳಿಸಿದರು. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಶ್ರೀ ಜಿ ವಿಜಯಕುಮಾರ್ ಮಾತನಾಡುತ್ತಾ. ಇತ್ತೀಚಿನ ವಿಶ್ವ ಆರೋಗ್ಯ ಸಂಸ್ಥೆ ವರದಿಗಳ ಪ್ರಕಾರ ರಕ್ತದಾನ ಮಾಡುವುದರಿಂದ ಶೇಕಡ 80% ಹೃದಯಘಾತ ಕಡಿಮೆಯಾಗುತ್ತದೆ ವಿದ್ಯಾರ್ಥಿಗಳು ಸದಾ ನವರೋವಿಕೆಯಿಂದ ಇರುತ್ತಾರೆ ಹಾಗೂ ದೇಹದಲ್ಲಿ ಕೊಬ್ಬಿನ ಅಂಶ ಕಡಿಮೆಯಾಗುತ್ತದೆ. ಎಂದು ರಕ್ತದಾನದಿಂದ ಆಗುವ
ಪ್ರಯೋಜನಗಳ ಬಗ್ಗೆ ಮಾತನಾಡಿದರು ಎನ್ಎಸ್ಎಸ್ ಸಂಚಾಲಕರಾದ ಡಾಕ್ಟರ್ ಸೋಮಶೇಖರ್. ಡಾಕ್ಟರ್ ಸುಧಾಕರ್ ರೆಡ್ ಕ್ರಾಸ್ ಸಂಚಾಲಕರಾದ ಡಾಕ್ಟರ್ ಪ್ರಸನ್ನ ಎಸ್ ಹೆಚ್. ಜೈ ಕೀರ್ತಿ ಎಚ್ ಟಿ ರೋವರ್ಸ್ ಹಾಗೂ ರೇಂಜರ್ಸ್ ವಿಭಾಗದ ಡಾಕ್ಟರ್ ಬಿ ಎಂ ಚಂದ್ರಶೇಖರ್. ಪವಿತ್ರ ಕೆಪಿ. ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾಕ್ಟರ್ ಸಕ್ರಾ ನಾಯಕ. ಡಾಕ್ಟರ್ ಪೂರ್ಣಿಮಾ ರೆಡ್ ಕ್ರಾಸ್ ನಿರ್ದೇಶಕರಾದ ಆರ್ ಗಿರೀಶ್. ಧರಣೇಂದ್ರ ದಿನಕರ್. ರೆಡ್ ಕ್ರಾಸ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು.