ಭದ್ರಾವತಿಯ ಸಂಚಿಯ ಹೊನ್ನಮ್ಮ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2024-25 ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಕಂಪ್ಯೂಟರ್ ಸೈನ್ಸ್ ಸಂಯೋಜನೆಯನ್ನು ನೂತನವಾಗಿ ಆರಂಭಿಸಿದೆ. ವಿದ್ಯಾರ್ಥಿಗಳು ಭೌತಶಾಸ್ತ್ರ, ರಸಾಯನಶಾಸ್ತ್ರ ಹಾಗೂ ಗಣಿತ ವಿಷಯಗಳೊಂದಿಗೆ ಕಂಪ್ಯೂಟರ್ ಸೈನ್ಸ್ ನ್ನು ಐಚ್ಛಿಕ ವಿಷಯವಾಗಿ ವ್ಯಾಸಂಗ ಮಾಡಲಿದ್ದಾರೆ. ನೂತನವಾಗಿ ಆರಂಭಿಸಿರುವ ಈ ಸಂಯೋಜನೆಗೆ ವಿದ್ಯಾರ್ಥಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತ ವಾಗಿದ್ದು ಮುಂದಿನ ಶೈಕ್ಷಣಿಕ ವರ್ಷದಲ್ಲಿ ದಾಖಲಾತಿ ಹೆಚ್ಚಾಗುವ ನಿರೀಕ್ಷೆಯಿದೆ. ಇಂದು ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಇವರ ಸಹಯೋಗದೊಂದಿಗೆ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಪಠ್ಯಪುಸ್ತಕಗಳನ್ನು ವಿತರಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯರಾದ ಡಾ.ಸಿದ್ಧಲಿಂಗ ಮೂರ್ತಿಯವರು ಭದ್ರಾವತಿಯ ನಾಗರೀಕರು ಈ ಹೊಸ ಸಂಯೋಜನೆಯ ಸದುಪಯೋಗ ಪಡೆಯಬೇಕೆಂದು ತಿಳಿಸಿದರು. ಈ ಸಂದರ್ಭದಲ್ಲಿ ಕ್ಲಬ್ ನ ಅಧ್ಯಕ್ಷರಾದ ರೊ.ಮುಸ್ತಾಕ್ ಅಲಿಶಾ ಹಾಗೂ ಕಾಲೇಜಿನ ಉಪನ್ಯಾಸಕ ಸಿಬ್ಬಂದಿ ಉಪಸ್ಥಿತರಿದ್ದರು.