ಗ್ರಾಮಾಂತರ ಪ್ರದೇಶದ ಸರ್ಕಾರಿ ಶಾಲಾ ಮಕ್ಕಳಲ್ಲೂ ಪ್ರತಿಭೆ ಇರುತ್ತದೆ. ಇಂತಹ ಮಕ್ಕಳಿಗೆ ಸರ್ಕಾರದ ಜೊತೆಗೆ ಸಂಘ ಸಂಸ್ಥೆಗಳ ನೆರವು ಪ್ರೋತ್ಸಾಹ ಅಗತ್ಯವಾಗಿ ಬೇಕಾಗುತ್ತದೆ. ಆಗ ಅವರ ಪ್ರತಿಭೆ ಅನಾವರಣಗೊಳ್ಳಲು ಸಾಧ್ಯವಾಗುತ್ತದೆ ಎಂದು ಅನ್ನಪೂರ್ಣೇಶ್ವರಿ ಸ್ವ – ಸಹಾಯ ಸಂಘದ ಅಧ್ಯಕ್ಷ ಕೆ.ಆರ್.ಚಂದ್ರಶೇಖರ್ ಅಭಿಮತ ವ್ಯಕ್ತಪಡಿಸಿದರು.
ಅವರು ನಿಧಿಗೆ ಜನತಾ ಕಾಲೋನಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಸಮವಸ್ತ್ರ ಹಾಗೂ ಅಗತ್ಯ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ರೋಟರಿ ಮಾಜಿ ಗವರ್ನರ್ ಜಿ.ವಿಜಯ್ ಕುಮಾರ್ ಮಾತನಾಡಿ, ಅಗತ್ಯ ವಿದ್ದಲ್ಲಿ ಸೇವೆ ಮಾಡಬೇಕು. ನಾವು ಮಾಡುವ ಸೇವೆ ಸದ್ ವಿನಿಯೋಗವಾಗಬೇಕು. ಈ ರೀತಿಯ ನೆರವು ಸಿಕ್ಕಾಗ ಮಕ್ಕಳು ಗ್ರಾಮೀಣ ಪ್ರದೇಶದ ಮಕ್ಕಳು ನಗರ ಪ್ರದೇಶದ ಮಕ್ಕಳಿಗಿಂತ ಹೆಚ್ಚು ಪ್ರತಿಭಾವಂತರಾಗುತ್ತಾರೆ. ಆದ್ದರಿಂದ ಸಂಘ ಸಂಸ್ಥೆಯವರು ಇಂತಹ ಸರ್ಕಾರಿ ಶಾಲೆಗಳ ಕಡೆ ಗಮನಹರಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಕಾರ್ಯದರ್ಶಿ ರವೀಶ್ ಮಾತನಾಡಿ, ನಮ್ಮ ಅನ್ನಪೂರ್ಣೇಶ್ವರಿ ಸ್ವ ಸಹಾಯ ಸಂಘದಿಂದ ಈ ರೀತಿ ಹಲವಾರು ಮನುಕುಲದ ಸೇವೆಗಳನ್ನು ಮಾಡುತ್ತಾ ಬಂದಿದ್ದೇವೆ ಎಂದರು.
ರೋಟರಿ ಶಿವಮೊಗ್ಗ ಪೂರ್ವ ಮಾಜಿ ಕಾರ್ಯದರ್ಶಿ
ಕಿರಣ್ ಕುಮಾರ್ ಮಾತನಾಡಿ, ರಸ್ತೆ ಸುರಕ್ಷಿತೆ ಬಗ್ಗೆ ಮಾಹಿತಿ ತಿಳಿಸಿದರು.
ಕಾರ್ಯಕ್ರಮದ ಅಧ್ಯ್ಷತೆ ವಹಿಸಿದ್ದ ಮುಖ್ಯೋಪಾಧ್ಯಾಯರಾದ ತುಳಸಿ ಅಡಿಗ ಮಾತನಾಡಿ, ಸರ್ಕಾರ ಹಾಗೂ ಸಂಘ ಸಂಸ್ಥೆಗಳ ನೆರವಿನಿಂದ ನಮ್ಮ ಶಾಲೆ ಮಾದರಿ ಶಾಲೆಯಾಗಿದೆ. ಈ ನಿಟ್ಟಿನಲ್ಲಿ ಸಂಘ ಸಂಸ್ಥೆಗಳಿಗೆ ಕೃತಜ್ಞತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಶಿಕ್ಷಕಿ ಸೋಮಬಾಯಿ ಹಾಗೂ ಮಕ್ಕಳು ಉಪಸ್ಥಿತರಿದ್ದರು.