ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಗೆ 7 ಜಿಲ್ಲಾ ಪ್ರಶಸ್ತಿ

ಶಿವಮೊಗ್ಗ: 2023-24ನೇ ಸಾಲಿನಲ್ಲಿ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯು ಮಾಡಿರುವ ಸೇವಾ ಚಟುವಟಿಕೆಗಳನ್ನು ಗುರುತಿಸಿ ರೋಟರಿ ಸಂಸ್ಥೆಯು ಏಳು ಜಿಲ್ಲಾ ಪ್ರಶಸ್ತಿಗಳನ್ನು ನೀಡಿ ಅಭಿನಂದಿಸಿದೆ. ನಗರದ ಕಾಸ್ಮೋ ಕ್ಲಬ್‌ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು.
ರೋಟರಿ ಮಾಹಿತಿ, ವೃತ್ತಿ ಮತ್ತು ಕೌಶಲ್ಯ ಅಭಿವೃದ್ಧಿ, ಮಹಿಳಾ ಮತ್ತು ಮಕ್ಕಳ ಆರೋಗ್ಯ, ಪ್ರಾಥಮಿಕ ಶಿಕ್ಷಣ ಮತ್ತು ಸಾಕ್ಷರತೆ, ಯುವ ಸಬಲೀಕರಣ ಕಲ್ಯಾಣ, ರಸ್ತೆ ಸುರಕ್ಷತೆ ಹಾಗೂ ಜೀವ ರಕ್ಷಣೆ ಕುರಿತು ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ನಿಕಟಪೂರ್ವ ಅಧ್ಯಕ್ಷ ಸತೀಶ್‌ಚಂದ್ರ ಅಧ್ಯಕ್ಷತೆಯಲ್ಲಿ ನಡೆಸಿದ ಸೇವಾ ಚಟುವಟಿಕೆಗಳನ್ನು ಗುರುತಿಸಿ ಜಿಲ್ಲಾ ಪ್ರಶಸ್ತಿ ನೀಡಲಾಗಿದೆ.
ಅಂತರಾಷ್ಟ್ರೀಯ ರೋಟರಿ ಅಧ್ಯಕ್ಷರು ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಗೆ ವಿಶೇಷ ಗೌರವ ಪ್ರಶಸ್ತಿ ಪ್ರದಾನ ಮಾಡಿದರು. ರೋಟರಿ ಸಮಸ್ತ ನಿರ್ದೆಶಕ ರಾಜು ಸುಬ್ರಹ್ಮಣ್ಯ, ಜಿಲ್ಲಾ ಗವರ್ನರ್ ಸಿ.ಎ.ದೇವಾನಂದ್, ಜಿಲ್ಲಾ ಮಾಜಿ ಗವರ್ನರ್ ಡಾ. ಗೌರಿ, ನಿಕಟಪೂರ್ವ ಜಿಲ್ಲಾ ಗವರ್ನರ್ ಬಿ.ಸಿ.ಗೀತಾ, ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ವಸಂತ ಹೋಬಳಿದಾರ್, ಡಾ. ಗುಡದಪ್ಪ ಕಸಬಿ, ಎ.ಟಿ.ಸುಬ್ಬೇಗೌಡ, ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಅರುಣ್ ದೀಕ್ಷಿತ್, ನಿಕಟಪೂರ್ವ ಕಾರ್ಯದರ್ಶಿ ಡಿ.ಕಿಶೋರ್‌ಕುಮಾರ್, ಡಾ. ಬಿ.ಆರ್.ಧನಂಜಯ, ಮಾಜಿ ಸಹಾಯಕ ಗವರ್ನರ್ ರವಿ ಕೋಟೋಜಿ, ರವೀಂದ್ರನಾಥ್ ಐತಾಳ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *