ಮಾಹಿತಿ ಕಾರ್ಯಾಗಾರದಲ್ಲಿ ರೋಟರಿ ಸದಸ್ಯತ್ವ ಅಭಿವೃದ್ಧಿ ವೈಸ್ ಚೇರ್ಮನ್ ವೀರಣ್ಣ ಹುಗ್ಗಿ ಅಭಿಮತ
ಶಿವಮೊಗ್ಗ : ಅಂತರಾಷ್ಟ್ರೀಯ ರೋಟರಿ ಸಂಸ್ಥೆಯಲ್ಲಿ ಸದಸ್ಯತ್ವ ಪಡೆಯುವುದು ಹೆಮ್ಮೆಯ ವಿಷಯವಾಗಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ರೋಟರಿ ಸಂಸ್ಥೆಯಿಂದ ಸಮಾಜಮುಖಿ ಕೆಲಸಗಳನ್ನು ಬಹಳಷ್ಟು ಮಾಡಲಾಗಿದೆ ಎಂದು ರೋಟರಿ ಜಿಲ್ಲೆ 3182 ರ ಸದಸ್ಯತ್ವ ಅಭಿವೃದ್ಧಿ ವೈಸ್ ಚೇರ್ಮನ್ ವೀರಣ್ಣ ಹುಗ್ಗಿ ಹೇಳಿದರು.
ನಗರದ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ರೋಟರಿ ಸದಸ್ಯತ್ವದ ಬಗ್ಗೆ ಏರ್ಪಡಿಸಿದ್ದ ಮಾಹಿತಿ ಕಾರ್ಯಗಾರ
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಅವರು, ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ರೋಟರಿ ಸಂಸ್ಥೆಯಿಂದ ಸಮಾಜಮುಖಿ ಕೆಲಸಗಳು ಬಹಳಷ್ಟು ಮಾಡಿದ್ದು, ಮುಖ್ಯವಾಗಿ ಪಲ್ಸ್ ಪೋಲಿಯೋ ನಿರ್ಮೂಲನೆಯಲ್ಲಿ ರೋಟರಿ ಸಂಸ್ಥೆಯ ಪಾತ್ರ ಎಂದಿಗೂ ಮರೆಯಲು ಸಾಧ್ಯವಿಲ್ಲ. ಹಾಗೆಯೇ ಇನ್ನು ಅನೇಕ ಕ್ಷೇತ್ರಗಳಲ್ಲಿ ಸಾಕಷ್ಟು ಕೆಲಸಗಳನ್ನು ಮಾಡಿದ್ದು, ಸರ್ಕಾರಿ ಶಾಲೆಗಳಲ್ಲಿ, ಆಸ್ಪತ್ರೆಗಳಲ್ಲಿ, ಹಳ್ಳಿಗಳಲ್ಲಿ ಅಭಿವೃದ್ಧಿಯ ಕೆಲಸಗಳು ಇನ್ನು ಅನೇಕ ಕ್ಷೇತ್ರಗಳಲ್ಲಿ ಬಹಳಷ್ಟು ಕೆಲಸ ಮಾಡಲಾಗಿದೆ ಎಂದರು.
ವಿದ್ಯಾರ್ಥಿಗಳಿಗೆ ಇಂಟರ್ನೆಟ್ ಹಾಗೂ ರೋಟರ್ ಆಕ್ಟ್ ಪ್ರಾರಂಭಿಸಿದ್ದು, ವಿದ್ಯಾರ್ಥಿಗಳು ಕಲಿಕೆಯೊಂದಿಗೆ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳುವಲ್ಲಿ ಬಹಳಷ್ಟು ಸಹಕಾರಿಯಾಗಿದೆ. ಆದ್ದರಿಂದ ನೂತನವಾಗಿ ರೋಟರಿ ಸಂಸ್ಥೆಗೆ ಸೇರಿದ ಸದಸ್ಯರು ಹಾಗೂ ಎಲ್ಲಾ ರೋಟರಿ ಸದಸ್ಯರು ಸಕ್ರಿಯವಾಗಿ ರೋಟರಿ ಸಂಸ್ಥೆಯಿಂದ ನಡೆಸಿಕೊಡುವ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಮತ್ತು ತಮ್ಮ ಬಿಡುವಿನ ಸಮಯದಲ್ಲಿ ಸಮಾಜಮುಖಿ ಸೇವೆಗಳಲ್ಲಿ ಭಾಗವಹಿಸಿ ಎಂದು ತಿಳಿಸಿದರು.
ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ನ ಅಧ್ಯಕ್ಷ ಕಿರಣ್ ಕುಮಾರ್ ಮಾತನಾಡಿ, ರೋಟರಿ ಸಂಸ್ಥೆಯಿಂದ ವೈಯಕ್ತಿಕ ವರ್ಚಸ್ಸು ಹೆಚ್ಚುತ್ತದೆ. ಹಾಗೂ ಸಮಾಜಮುಖಿ ಕೆಲಸಗಳಲ್ಲಿ ಭಾಗವಹಿಸುವುದರಿಂದ ನಾವು ಸಮಾಜದಲ್ಲಿ ಗುರುತಿಸಿಕೊಳ್ಳಲು ಬಹಳಷ್ಟು ಸಹಕಾರಿಯಾಗಿದೆ. ಅದರಂತೆಯೇ ಎಲ್ಲಾ ಸದಸ್ಯರು ಅಂತರಾಷ್ಟ್ರೀಯ ರೋಟರಿ ಸಂಸ್ಥೆಯ ಸದಸ್ಯರಾಗಿ ಗೌರವಾನ್ವಿತವಾಗಿ ಸಮಾಜದಲ್ಲಿ ಗುರುತಿಸಿಕೊಂಡು ಕೆಲಸದ ಜೊತೆಯಲ್ಲಿ ಸಮಾಜಕ್ಕೂ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಈಶ್ವರ್.ಬಿ.ಇ, ಮಾಜಿ ಅಸಿಸ್ಟೆಂಟ್ ಗವರ್ನರ್ ರವಿ ಕೋಟೋಜಿ,
ಕುಮಾರ್.ಎಸ್.ಕೆ, ಬಲರಾಮ್, ರಮೇಶ್, ಬಸವರಾಜ, ಸಂತೋಷ್, ಜಯಶೀಲ ಶೆಟ್ಟಿ, ಮುತ್ತಣ್ಣ, ನಟರಾಜ್, ರಾಜಶ್ರೀ ಬಸವರಾಜ್, ದೀಪಾ ಜಯಶೀಲ ಶೆಟ್ಟಿ, ಜ್ಯೋತಿಷ್ಯ ಸೇರಿದಂತೆ ಇನ್ನಿತರ ಸದಸ್ಯರು ಉಪಸ್ಥಿತರಿದ್ದರು.